ಅವಿಚ್ಛಿನ್ನ ಪರಂಪರೆಯ ಶ್ರೀ ಮಹಾಸಂಸ್ಥಾನದ ಈಗಿನ ಪೀಠಾಧಿಪತಿಗಳಾಗಿರುವ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು – ಪರಮಪೂಜ್ಯರೂ, ಮಹಾನ್ ತಪಸ್ವಿಗಳೂ, ಶ್ರೇಷ್ಠ ವಿದ್ವಾಂಸರೂ ಆಗಿದ್ದ ಬ್ರಹ್ಮಲೀನ ಶ್ರೀ ಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮಿಗಳವರಿಂದ ೧೯೯೪ರ ಏಪ್ರಿಲ್ ನಲ್ಲಿ ಸಂನ್ಯಾಸದೀಕ್ಷೆ ಪಡೆದರು.
೧೯೯೯ರ ಏಪ್ರಿಲ್ ನಲ್ಲಿ ಪೀಠಾರೋಹಣ ಮಾಡಿದಂದಿನಿಂದ ಜೀವ ಜಗತ್ತಿನ ಶಾಂತಿ ಸಮೃದ್ಧಿಗಾಗಿ ತಮ್ಮನ್ನು ಸಮರ್ಪಿಸಿಕೊಂಡರು. ಅಧ್ಯಾತ್ಮದ ಬಲದಿಂದ ಜನಸಮುದಾಯವನ್ನು ಬೆಳಕಿನೆಡೆಗೆ ಕೊಂಡೊಯ್ಯುತ್ತಿರುವ ಜೀವ ಕಾರುಣ್ಯದ ನೆಲೆಯಾಗಿರುವ ಶ್ರೀ ಶ್ರೀಗಳವರು ಈ ಜಗತ್ತು ಅವಿರತವಾಗಿ ಅನಂತಕಾಲದವರೆಗೂ ಪರಮಾನಂದದಲ್ಲಿ ನಿರತವಾಗಲೆನ್ನುವ ಸಂಕಲ್ಪದಿಂದ ಕಾರ್ಯನಿರತರಾಗಿದ್ದಾರೆ.
ಪರಮಪೂಜ್ಯರ ಧೀಶಕ್ತಿ, ಪ್ರಜ್ಞಾವಂತಿಕೆ, ತಪೊಬಲ, ಜೀವದಯೆ ಅವರನ್ನು ಈ ಜಗತ್ತಿನ ಶ್ರೇಷ್ಟ ಅಧ್ಯಾತ್ಮನಾಯಕರನ್ನಾಗಿಸಿವೆ.



