ಯಾವ ಮಹಾಮಹಿಮನ ಕೃಪೆಯು ನನ್ನ ಬದುಕಿನ ಎಲ್ಲ ಅಂಗಗಳಲ್ಲಿ ವ್ಯಾಪಿಸಿದೆಯೋ, ಯಾವ ಮಮತಾಮಯಿಯ ಕರುಣೆಯು ವಿಧಿಯಾಟದ ಸುಳಿಯಲ್ಲಿ ಕಳೆದು ಹೋಗುತ್ತಿದ್ದ ಬದುಕನ್ನು ಮೇಲೆತ್ತಿ, ಉದಾತ್ತವಾದುದನ್ನು ಕಿಂಚಿತ್ತಾದರೂ ಅರ್ಥೈಸಿಕೊಳ್ಳಲು ನನ್ನನ್ನು ಪ್ರೇರಿಸಿದೆಯೋ,ಅಂತಹ ಮಹಾತ್ಮನ ಕುರಿತಾಗಿ ನನ್ನ ಕೆಲವು ಭಾವನೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳಬಯಸುತ್ತಿದ್ದೇನೆ. ಕುರುಡನು ಆನೆಯ ಬಗ್ಗೆ ವರ್ಣಿಸ ಹೊರಟಂತೆ ನಾನೆಷ್ಟೇ ಹೇಳಿದರೂ ಅದು ಆ ವಿರಾಟ್ ವ್ಯಕ್ತಿತ್ವದ ಕಿಂಚಿನ್ಮಾತ್ರವನ್ನೂ ಹೇಳಿದಂತಾಗದೆಂದು ನನಗೆ… Continue Reading →