|| ಹರೇರಾಮ || ಋತುರಾಜ ವಸಂತನ ವಿಲಾಸ…! ಚಿಗುರು ಚೆಲುವಿನ ಚೈತ್ರಮಾಸ…! ಬೆಳದಿಂಗಳು ಬೆಳೆಯುವ ಶುಕ್ಲಪಕ್ಷ…! ಇಂದು ನವಮೀ…! ಅಂತಿಂಥಾ ನವಮಿಯಲ್ಲ…ಶ್ರೀರಾಮನವಮೀ…! ಸ್ವಯಂ ನಾರಾಯಣನೇ ನರನಾದ ದಿನ…! ದೊರೆಯ ರೂಪದಲ್ಲಿ ಧರೆಗಿಳಿದ ದೇವರು ಧರೆಯಿಂದ ಸ್ವರ್ಗಕ್ಕೆ ಸೇತುವೆ ಕಟ್ಟಲಾರಂಭಿಸಿದ ದಿನ…! ಪ್ರಭು ಬರುವುದು ಯುಗಕ್ಕೊಮ್ಮೆ…! ಈ ದಿನ ಬರುವುದು ವರುಷಕ್ಕೊಮ್ಮೆ…! ನಿನ್ನೆ ಇರದ, ನಾಳೆ ಬರದ… Continue Reading →
An atheist and a believer had the same doctor.
Every time they met in the doctor’s waiting room, they would argue and end up insulting each other.
” U realy believe that you are going to be saved on Judgment Day and go up to
heaven..?
Do u realy believe everything you read in the Bible, and everything
they told you in church?”
said the atheist.
“I’m not certain of anything,” the believer replied.
“Like u I have doubts. But I stil hav hope.”
“But I don’t have doubts,” the atheist cried. “I have only certainties.
For example, I can assure you that God has nothing to do with the ache in
your knee, and that He doesn’t care in the least how you feel.”
“ U don’t know what you’re talking about. And do you know something? You
are a believer too. I can prove it to you.”
ಇತ್ತ…
ಕಡಲ ಒಡಲಲ್ಲಿ ಬಾಯ್ದೆರೆದು ಕಾಯುವುದು ಕಪ್ಪೆ ಚಿಪ್ಪು ಸ್ವಾತಿ ಮಳೆ ಹನಿಯನ್ನು…
ಅತ್ತ…
ಮೋಡದ ಮಡಿಲಿನಿಂದ ಧರೆಗೆ ಧುಮ್ಮಿಕ್ಕುವ ಸ್ವಾತಿ ಮಳೆ ಹನಿ ಹುಡುಕಿಯೇ ಹುಡುಕುವುದು ತನಗಾಗಿ ಮಿಡುಕುವ ಕಪ್ಪೆಚಿಪ್ಪನ್ನು …
ಸ್ವಾತಿಯದಲ್ಲದೆ ಬೇರಾವ ಮಳೆಹನಿ ಕಪ್ಪೆ ಚಿಪ್ಪಿನೊಳ ಹೊಕ್ಕರೂ ಅದು ಕೇವಲ ನೀರು… ನೀರು…
ಸ್ವಾತಿ ಮಳೆಹನಿಯೇ ಆದರೂ ಕಪ್ಪೆ ಚಿಪ್ಪೊಳಗಲ್ಲದೆ ಬೇರೆಲ್ಲಿ ಬಿದ್ದರೂ ಅದು ಕೇವಲ ನೀರು … ನೀರು…
ಕಪ್ಪೆಚಿಪ್ಪಿನ ಹೃದಯಗರ್ಭದೊಳಸೇರಬೇಕು ಸ್ವಾತಿಯ ಜಲಬಿಂದು..
ಅದು ಮುತ್ತಿನ ಅವತಾರ…
ಸ್ವಾತಿ ಮಳೆ ಹನಿಗೆ ಆಗುವುದು ಮುತ್ತಾಗಿ ಪುನರ್ಜನ್ಮ…
ಕಪ್ಪೆ ಚಿಪ್ಪಿನೊಳ ಚೈತನ್ಯದ ಸಂಚಾರ…
ಇದನ್ನು ಹೋಲುವ ಅಪೂರ್ವ ಸಮಾಗಮವೊಂದರ ಫಲವಾಗಿಯೇ ರಾಮಾಯಣವೆಂಬ ಮುತ್ತು ಹುಟ್ಟಿತು…!!
ಕಪ್ಪೆಚಿಪ್ಪಿನ ತೆರದಿ ತೆರೆದ ಮನ ಹೊತ್ತ ವಾಲ್ಮೀಕಿ ಧರೆಯಲ್ಲಿ ಧೀರ್ಘ ಪ್ರತೀಕ್ಷೆಯಲ್ಲಿ ಇರುವಾಗ…
ಸ್ವಾತಿಯ ಸಲಿಲಧಾರೆಯಂತೆ ಮೋಡದ ನಾಡಿನಿಂದ ಇಳಿದು ಬಂದರು ನಾರದರು..!
Heart of Gratitude !!! A blind boy sat on the steps of a building with a hat by his feet. He held up a sign which said: “I am blind, please help.” There were only a few coins in the… Continue Reading →
ಮೊಟ್ಟಮೊದಲಬಾರಿಗೆ ಗಟ್ಟಿ ಗಟ್ಟಿ ಅಕ್ಕಿಯಿಂದ ಮೃದು – ಮೃದುವಾದ, ಮಧುರ – ಮಧುರವಾದ, ರುಚಿ – ರುಚಿಯಾದ ಅನ್ನವನ್ನು ಸಿದ್ಧಪಡಿಸಬಹುದೆಂಬುದನ್ನು ಯಾರು ಕಂಡುಹಿಡಿದರು..?
ಮನವನ್ನು ಮನಗಳೊಂದಿಗೆ ಬೆರೆಸಲು ನೆರವೀಯುವ ಅಕ್ಷರಗಳನ್ನು ಮೊಟ್ಟಮೊದಲು ಕಂಡುಹಿಡಿದವರಾರು..?
ಬೆಣ್ಣೆ- ಬೆಣ್ಣೆಯಂತಹ ಹತ್ತಿಯಿಂದ ಎಳೆ – ಎಳೆಯಾಗಿ ನೂಲೆಳೆದು ಹಾಗೊಂದು – ಹೀಗೊಂದು ನೇಯ್ದು, ಮೈಮರೆಸುವ – ಮೈಮೆರೆಸುವ ಉಡುಗೆ ತೊಡುಗೆಗಳನ್ನು ನಿರ್ಮಿಸಬಹುದೆಂಬುದು ಯಾರ ಅನ್ವೇಷಣೆ..?
ಬಾಯಾರಿದರೆ ಬಾವಿಗಿಳಿಯಬೇಕಾಗಿಲ್ಲ…!
ಕೊಡದ ಕೊರಳಿಗೆ ಕುಣಿಕೆ ತೊಡಿಸಿ ಬಾವಿಗಿಳಿಸಿದರೆ ಅದರೊಳಗೆ ಕುಳಿತು ನೀರೇ ಮೇಲೇರಿ ನಮ್ಮೆಡೆಗೆ ಬರಬಹುದೆಂಬುದನ್ನು ಕಂಡುಹಿಡಿದವನ ಹೆಸರೇನು..?
ಅಕ್ಕಿಯೊಳಗನ್ನವನು ಮೊದಲಾರು ಕಂಡವನು..?|
ಅಕ್ಕರದ ಬರಹಕ್ಕೆ ಮೊದಲಿಗನದಾರು..? ||
ಲೆಕ್ಕವಿರಿಸಿಲ್ಲ ಜಗ ತನ್ನಾದಿಬಂಧುಗಳ.. |
ಸಿಕ್ಕುವುದೆ ನಿನಗೆ ಜಸ – ಮಂಕುತಿಮ್ಮ…||
ಬದುಕಿನ ಭವನದ ಮೂಲಾಧಾರಶಿಲೆಗಳನ್ನಿಟ್ಟವರ ಗುರುತೇ ಇಲ್ಲ…!
ಆದರೆ ಹೆಸರಿಗಾಗಿ ಓಟ ಮಾತ್ರ ನಿಂತಿಲ್ಲ..!
ಹೆಸರಿಗಾಗಿ ಉಸಿರುಗಟ್ಟಿ ಓಡುವವರೇ…….!!!!
ಈ ಬ್ರಹ್ಮಾಂಡದಲ್ಲಿ ಅದೆಲ್ಲಿ ಕೆತ್ತಿದರೂ ಶಾಶ್ವತವಾಗಿ ಉಳಿಯದು ನಿಮ್ಮ ಹೆಸರು..!!