ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀಮಹಾಸ್ವಾಮಿಗಳವರ ಚರಣಪದ್ಮಗಳಿಗೆ ನನ್ನ ಸಾಷ್ಟಾಂಗ ಪ್ರಣಾಮಗಳು. ಭಾರತ ಸಮೃದ್ಧ ಹಾಗೂ ಸಂಪನ್ನ ರಾಷ್ಟ್ರ. ನಮ್ಮ ಭಾರತವು ವಿಶ್ವದ ಹೃದಯ ಭಾಗದಲ್ಲಿದೆ. ಮಾನವ ಶರೀರದ ಪ್ರತಿಯೊಂದು ಅವಯವಕ್ಕೂ ಶಕ್ತಿ, ತೇಜಸ್ಸು, ಮತ್ತು ರಕ್ತ ಸಂಚಾರವು ಹೃದಯದಿಂದಲೇ ವಿನಿಯೋಗವಾಗುವಂತೆ ಪ್ರಪಂಚದ ಪ್ರತಿಯೊಂದು ಪ್ರದೇಶಕ್ಕೂ ಭಾರತ ದೇಶದಿಂದಲೇ ಧಾರ್ಮಿಕತೆ, ಜ್ಞಾನ, ಸಂಸ್ಕೃತಿ ಮುಂತಾದವುಗಳು ಪ್ರಸಾರವಾಗುತ್ತಿದೆ…. Continue Reading →
ಶ್ರೀರಾಮನ ನಂತರದ ಸೂರ್ಯವಂಶದ ಭವಿಷ್ಯದ ಕುರಿತು ಬಂದಿರುವ ಹಲವಾರು ಪ್ರಶ್ನೆಗಳಿಗೆ ಶ್ರೀ ಭಾಗವತದಲ್ಲಿ ಕಂಡುಬರುವ ಉತ್ತರವಿದು..
• ಪ್ರಭು ಶ್ರೀರಾಮಚಂದ್ರನಿಗೆ ಲವ-ಕುಶರೀರ್ವರು ಮಕ್ಕಳು..
• ಭರತನಿಗೆ ತಕ್ಷ-ಪುಷ್ಕಲರು..
• ಲಕ್ಷ್ಮಣನಿಗೆ ಅಂಗದ-ಚಂದ್ರಕೇತುಗಳು..
• ಶತ್ರುಘ್ನನಿಗೆ ಸುಬಾಹು-ಶತ್ರುಪಾತಿಗಳು..
• ಇವರಲ್ಲಿ ಹಿರಿಯವನಾದ ಕುಶನು ಕುಮುದ್ವತಿಯನ್ನು ವರಿಸಿ ಕುಶಾವತಿ ಅಥವಾ ಕುಶಸ್ಥಲಿಯಲ್ಲಿ ರಾಜ್ಯವಾಳುತ್ತಾನೆ..
• ಲವನು ಶ್ರಾವಸ್ತಿ ಅಥವಾ ಲವಸ್ಥಲಿಯಲ್ಲಿ, ತಕ್ಷನು ತಕ್ಷಶಿಲೆಯಲ್ಲಿ, ಪುಷ್ಕಲನು ಪುಷ್ಕಲಾವತದಲ್ಲಿ, ಅಂಗದನು ಕಾರುಪಥದಲ್ಲಿ,ಚಂದ್ರಕೇತುವು ಚಂದ್ರಕಾಂತದಲ್ಲಿ, ಸುಬಾಹು ಮಧುರಾನಗರಿಯಲ್ಲಿ, ಶತ್ರುಪಾತಿಯು ವಿದಿಶಾನಗರಿಯಲ್ಲಿ ರಾಜ್ಯವಾಳಿದರು..