ಸೆ. 21, 2020ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಅಧಿವೇಶನದಲ್ಲೇ ‘ಸಂಪೂರ್ಣ ಗೋಹತ್ಯಾ ನಿಷೇಧ ಮತ್ತು ಭಾರತೀಯ ಗೋತಳಿಗಳ ಸಂರಕ್ಷಣೆ-ಸಂವರ್ಧನೆಗೆ ಅನುವು ಮಾಡಿಕೊಡುವ ಮಸೂದೆ’ಯನ್ನು ಅಂಗೀಕರಿಸಬೇಕು ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಶ್ರೀರಾಮಚಂದ್ರಾಪುರದ ಭಾರತೀಯ ಗೋಪರಿವಾರ ವತಿಯಿಂದ ಅಭಯಾಕ್ಷರ ಅಭಿಯಾನದಡಿ ಒಂದು ಕೋಟಿಗೂ ಅಧಿಕ ಮಂದಿಯ ಪ್ರತ್ಯೇಕ ಹಕ್ಕೊತ್ತಾಯ ಪತ್ರಗಳನ್ನು ರಾಜ್ಯದ ಮುಖ್ಯಮಂತ್ರಿ ಹಾಗೂ ದೇಶದ ಪ್ರಧಾನಿಯವರಿಗೆ ಸಲ್ಲಿಸಲಾಗಿದೆ. ಪಕ್ಷಭೇದ, ಧರ್ಮಭೇದ ಮರೆತು ನಾಡಿನ ಎಲ್ಲ ಸ್ತರಗಳ ಗಣ್ಯರು ಹಕ್ಕೊತ್ತಾಯ ಮಂಡಿಸಿದ್ದು, ಸರ್ಕಾರ ಇನ್ನು ವಿಳಂಬ ಮಾಡದೆ ಪ್ರಸಕ್ತ ಅಧಿವೇಶನದಲ್ಲೇ ಗೋಹತ್ಯೆ ನಿಷೇಧದ ಮಸೂದೆ ಅಂಗೀಕರಿಸಬೇಕು ಎಂದು ಸ್ವಾಮೀಜಿ ಆಗ್ರಹಿಸಿದ್ದಾರೆ.
ಈ ಕುರಿತ ಮಾಧ್ಯಮ ವರದಿಗಳು:
Leave a Reply