Chitralekha! She was dancer of Devaloka (divine land, heaven). She was blessed with the blissful task of charming with her delightful dance those divine souls who earned entry to heaven owing to their spiritual and philanthropic deeds on earth! Quirk… Continue Reading →
A minister should be well versed with the happenings within the country; happenings outside the country too. That was how Dasharatha’s ministers were. Here’s what Maharshi Valmiki had to say about them: तेषामविदितं किञ्चित् स्वेषु नास्ति परेषु वा। क्रियमाणं कृतं… Continue Reading →
ದೀಪಾವಳಿ ಹಬ್ಬ ಬಂದಾಗ ಸಹಜವಾಗಿ ಪಟಾಕಿ ಹೇಗೆ ನೆನಪಾಗುವುದೋ ಹಾಗೆಯೇ ಗೋಪೂಜೆಯೂ ನೆನಪಾಗುತ್ತದೆ. ಈಗಿನ ಸಂದರ್ಭ ಹೇಗಿದೆ ಎಂದರೆ, ಪೂಜೆ ಪುನಸ್ಕಾರಗಳನ್ನು ಮೂಢನಂಬಿಕೆ ಎನ್ನುವ ಜನರ ನಡುವೆ ನಾವಿದ್ದೇವೆ. ನಿಜವಾಗಿಯೂ ಗೋಪೂಜೆ ಎಂದರೇನು ಎಂಬುದನ್ನು ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು ವಿವರಿಸಿದ್ದಾರೆ ಈ ಸಲದ ಕೌಸ್ಟೋರಿಯಲ್ಲಿ ವಿವರಿಸಿದ್ದಾರೆ.. ಪ್ರಕಟಣೆ ಕೃಪೆ: ಗೋವಾಣಿ e-ವಾರಪತ್ರಿಕೆ ( www.gouvaani.in ) ಗೋಪೂಜೆ… Continue Reading →
ಇಂದಿನ ಮಾತು : ‘ನೀನು ಕೇಳಿದ್ದನ್ನು ಕೊಡುವೆ!’ ನಾಳೆಯ ಮಾತು :‘ನಾನು ಹಾಗೆ ಹೇಳಿಯೇ ಇಲ್ಲ!’ ಸಾಮಾನ್ಯ ಪ್ರಜೆಯು ಹೀಗೆ ಮಾಡಿದರೆ ಅವನ ಬದುಕು ಬರಡಾದೀತು; ನಾಡೇ ಮನೆಯಾದ ದೊರೆಯ ನುಡಿಯು ಎರಡಾದರೆ ನಾಡಿಗೆ ನಾಡೇ ಬರಡಾದೀತು! ಅಂಗರಾಜ್ಯದ ದೊರೆ ರೋಮಪಾದನಿಗೆ ಇದು ಅರ್ಥವಾಗುವಾಗ ಅನರ್ಥವಾಗಿತ್ತು! ತಪಸ್ವೀ ವಿಪ್ರನೋರ್ವನಿಗೆ ಕೇಳಿದ್ದನ್ನು ಕೊಡುವೆನೆಂದು ನುಡಿದ ಅಂಗರಾಜ, ಕೇಳಿದಾಗ… Continue Reading →
ದೇಶಿಯತೆಯ ಬುನಾದಿ ಇದ್ದರಷ್ಟೆ ದೇಶಕ್ಕೊಂದು ಗಟ್ಟಿ ಅಸ್ತಿತ್ವ. ದೇಶಿಯತೆಯಲ್ಲಿ ನಮ್ಮ ಸಂಸ್ಕೃತಿ, ಭಾಷೆ, ಆಚರಣೆ, ಪಾರಂಪರಿಕ ವ್ಯವಸ್ಥೆ ಎಲ್ಲವೂ ಬಂತು. ನಮ್ಮ ದೇಶದ ಮಟ್ಟಿಗೆ ಹೇಳುವುದಾದರೆ ನಮ್ಮದು ಗೋಕೇಂದ್ರಿತ ಬದುಕಿನ ವ್ಯವಸ್ಥೆಯಾಗಿತ್ತು. ಆದರೆ ಕಾಲಕ್ರಮೇಣ ನಶಿಸಿಹೋದ ಈ ವ್ಯವಸ್ಥೆಯ ಪುನರುತ್ಥಾನಕ್ಕೆ ಇದು ಸಕಾಲ. ದೇಶೀ ಗೋಸಂರಕ್ಷಣೆ ಗೊಂದಲವಿಲ್ಲದೆ ನಡೆಯಬೇಕಾದ ಕಾರ್ಯ ಎಂಬುದನ್ನು ವಿವರಿಸಿದ್ದಾರೆ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ… Continue Reading →
ಬೆಂಗಳೂರು : ಗುರುವನ್ನು ತಿರಸ್ಕರಿಸಿದರೆ, ಗುರುವನ್ನು ಅಗೌರವದಿಂದ ಕಂಡರೆ ನೋವು – ಪತನ ನಿಶ್ಚಿತ, ದೇವರಾಜ ಇಂದ್ರ ದೇವಗುರು ಬೃಹಸ್ಪತಿಯನ್ನು ಅಗೌರವದಿಂದ ಕಂಡದ್ದರಿಂದ ದಾನವರ ಜೊತೆ ನಡೆದ ಯುದ್ಧದಲ್ಲಿ ಸೋತು ಸರ್ವಪತನ ಹೊಂದಿದ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀರಾಮಚಂದ್ರಾಪುರದ ಬೆಂಗಳೂರು ಶಾಖಾಮಠದಲ್ಲಿ ಸಂಪನ್ನವಾದ ಗೋಕಥಾದಲ್ಲಿ ಸಮುದ್ರ ಮಥನ – ಕಾಮಧೇನು… Continue Reading →
ಬದುಕಿನ ಸಕಲ ಸಂಗತಿಗಳೂ ಮೊದಲು ಅಂತರಂಗದಲ್ಲಿ ನಿರ್ಮಾಣವಾಗುತ್ತವೆ..
ಆಮೇಲೆ ಬಹಿರಂಗದಲ್ಲಿ ಆಕಾರ ತಾಳಿ ಪ್ರಕಟಗೊಳ್ಳುತ್ತವೆ..
ಎಲ್ಲೆಡೆ ಎದ್ದು ಕಾಣುವ ತಥ್ಯವಿದು..
ಮನದಲ್ಲಿ ಮೊದಲು ಮೂಡಿದ ಭಾವಗಳಲ್ಲವೇ ಮತ್ತೆ ಮುಖದಲ್ಲಿ ಮಾತಾಗಿ ವ್ಯಕ್ತವಾಗುವುದು..!?
ಮಹಾಮಾನವರ ಮಸ್ತಿಷ್ಕದ ಮನೆಯಲ್ಲಿ ಮೂಡಿಬರುವ ಯೋಜನೆಗಳಲ್ಲವೆ,
ಮಹತ್ಕೃತಿಗಳಾಗಿ ಈ ಜಗದಲ್ಲಿ ತೋರಿ ಬರುವುದು..!?
ಕದನಗಳು ಮೊದಲಾಗುವುದು ಮನಸಿನಲ್ಲಿ ..
ಪತನಗಳು ಮೊದಲಾಗುವುದು ಮನಸಿನಲ್ಲಿ..
ಇತ್ತ…
ಕಡಲ ಒಡಲಲ್ಲಿ ಬಾಯ್ದೆರೆದು ಕಾಯುವುದು ಕಪ್ಪೆ ಚಿಪ್ಪು ಸ್ವಾತಿ ಮಳೆ ಹನಿಯನ್ನು…
ಅತ್ತ…
ಮೋಡದ ಮಡಿಲಿನಿಂದ ಧರೆಗೆ ಧುಮ್ಮಿಕ್ಕುವ ಸ್ವಾತಿ ಮಳೆ ಹನಿ ಹುಡುಕಿಯೇ ಹುಡುಕುವುದು ತನಗಾಗಿ ಮಿಡುಕುವ ಕಪ್ಪೆಚಿಪ್ಪನ್ನು …
ಸ್ವಾತಿಯದಲ್ಲದೆ ಬೇರಾವ ಮಳೆಹನಿ ಕಪ್ಪೆ ಚಿಪ್ಪಿನೊಳ ಹೊಕ್ಕರೂ ಅದು ಕೇವಲ ನೀರು… ನೀರು…
ಸ್ವಾತಿ ಮಳೆಹನಿಯೇ ಆದರೂ ಕಪ್ಪೆ ಚಿಪ್ಪೊಳಗಲ್ಲದೆ ಬೇರೆಲ್ಲಿ ಬಿದ್ದರೂ ಅದು ಕೇವಲ ನೀರು … ನೀರು…
ಕಪ್ಪೆಚಿಪ್ಪಿನ ಹೃದಯಗರ್ಭದೊಳಸೇರಬೇಕು ಸ್ವಾತಿಯ ಜಲಬಿಂದು..
ಅದು ಮುತ್ತಿನ ಅವತಾರ…
ಸ್ವಾತಿ ಮಳೆ ಹನಿಗೆ ಆಗುವುದು ಮುತ್ತಾಗಿ ಪುನರ್ಜನ್ಮ…
ಕಪ್ಪೆ ಚಿಪ್ಪಿನೊಳ ಚೈತನ್ಯದ ಸಂಚಾರ…
ಇದನ್ನು ಹೋಲುವ ಅಪೂರ್ವ ಸಮಾಗಮವೊಂದರ ಫಲವಾಗಿಯೇ ರಾಮಾಯಣವೆಂಬ ಮುತ್ತು ಹುಟ್ಟಿತು…!!
ಕಪ್ಪೆಚಿಪ್ಪಿನ ತೆರದಿ ತೆರೆದ ಮನ ಹೊತ್ತ ವಾಲ್ಮೀಕಿ ಧರೆಯಲ್ಲಿ ಧೀರ್ಘ ಪ್ರತೀಕ್ಷೆಯಲ್ಲಿ ಇರುವಾಗ…
ಸ್ವಾತಿಯ ಸಲಿಲಧಾರೆಯಂತೆ ಮೋಡದ ನಾಡಿನಿಂದ ಇಳಿದು ಬಂದರು ನಾರದರು..!
ಮೊಟ್ಟಮೊದಲಬಾರಿಗೆ ಗಟ್ಟಿ ಗಟ್ಟಿ ಅಕ್ಕಿಯಿಂದ ಮೃದು – ಮೃದುವಾದ, ಮಧುರ – ಮಧುರವಾದ, ರುಚಿ – ರುಚಿಯಾದ ಅನ್ನವನ್ನು ಸಿದ್ಧಪಡಿಸಬಹುದೆಂಬುದನ್ನು ಯಾರು ಕಂಡುಹಿಡಿದರು..?
ಮನವನ್ನು ಮನಗಳೊಂದಿಗೆ ಬೆರೆಸಲು ನೆರವೀಯುವ ಅಕ್ಷರಗಳನ್ನು ಮೊಟ್ಟಮೊದಲು ಕಂಡುಹಿಡಿದವರಾರು..?
ಬೆಣ್ಣೆ- ಬೆಣ್ಣೆಯಂತಹ ಹತ್ತಿಯಿಂದ ಎಳೆ – ಎಳೆಯಾಗಿ ನೂಲೆಳೆದು ಹಾಗೊಂದು – ಹೀಗೊಂದು ನೇಯ್ದು, ಮೈಮರೆಸುವ – ಮೈಮೆರೆಸುವ ಉಡುಗೆ ತೊಡುಗೆಗಳನ್ನು ನಿರ್ಮಿಸಬಹುದೆಂಬುದು ಯಾರ ಅನ್ವೇಷಣೆ..?
ಬಾಯಾರಿದರೆ ಬಾವಿಗಿಳಿಯಬೇಕಾಗಿಲ್ಲ…!
ಕೊಡದ ಕೊರಳಿಗೆ ಕುಣಿಕೆ ತೊಡಿಸಿ ಬಾವಿಗಿಳಿಸಿದರೆ ಅದರೊಳಗೆ ಕುಳಿತು ನೀರೇ ಮೇಲೇರಿ ನಮ್ಮೆಡೆಗೆ ಬರಬಹುದೆಂಬುದನ್ನು ಕಂಡುಹಿಡಿದವನ ಹೆಸರೇನು..?
ಅಕ್ಕಿಯೊಳಗನ್ನವನು ಮೊದಲಾರು ಕಂಡವನು..?|
ಅಕ್ಕರದ ಬರಹಕ್ಕೆ ಮೊದಲಿಗನದಾರು..? ||
ಲೆಕ್ಕವಿರಿಸಿಲ್ಲ ಜಗ ತನ್ನಾದಿಬಂಧುಗಳ.. |
ಸಿಕ್ಕುವುದೆ ನಿನಗೆ ಜಸ – ಮಂಕುತಿಮ್ಮ…||
ಬದುಕಿನ ಭವನದ ಮೂಲಾಧಾರಶಿಲೆಗಳನ್ನಿಟ್ಟವರ ಗುರುತೇ ಇಲ್ಲ…!
ಆದರೆ ಹೆಸರಿಗಾಗಿ ಓಟ ಮಾತ್ರ ನಿಂತಿಲ್ಲ..!
ಹೆಸರಿಗಾಗಿ ಉಸಿರುಗಟ್ಟಿ ಓಡುವವರೇ…….!!!!
ಈ ಬ್ರಹ್ಮಾಂಡದಲ್ಲಿ ಅದೆಲ್ಲಿ ಕೆತ್ತಿದರೂ ಶಾಶ್ವತವಾಗಿ ಉಳಿಯದು ನಿಮ್ಮ ಹೆಸರು..!!
ಜೀವಿ ಎಷ್ಟು ಕಾಲ ಬದುಕಿರುತ್ತಾನೆ ಎಂಬುದಕ್ಕಿಂತ, ಹೇಗೆ ಬದುಕುತ್ತಾನೆ ಎಂಬುದು ಮುಖ್ಯ.
ಹೇಗೆ ಬದುಕುತ್ತಾನೆ ಎಂಬುದಕ್ಕಿಂತಲೂ, ಹೇಗೆ ಸಾಯುತ್ತಾನೆ ಎಂಬುದು ಇನ್ನೂ ಮುಖ್ಯ ..!
ಬದುಕು ಪರೀಕ್ಷೆಯಾದರೆ, ಸಾವು ಅದರ ಫಲಿತಾಂಶ.
ಹೇಗೆ ಬದುಕಬೇಕೆಂಬ ನಿರ್ಧಾರವನ್ನು ಸಾಮಾನ್ಯರು ಮಾಡಬಹುದು. .
ಆದರೆ, ಹೇಗೆ ಸಾಯಬೇಕೆಂಬುದನ್ನು ನಿರ್ಧರಿಸಲು ಅಸಾಮಾನ್ಯರಿಗೆ ಮಾತ್ರವೇ ಸಾಧ್ಯ..!