Tag valmiki

ಶ್ರೀರಾಮಾಯಣದ ಅಂಕುರ ವಲ್ಮೀಕದಲ್ಲಿ…!!

ತಮೋನಿರ್ಮುಕ್ತೆ ತಮಸೆಯ ಪರಿಶುದ್ಧಪ್ರವಾಹ..
ಮುಗಿಲು ಮುತ್ತಿಕ್ಕುವ ಗಿರಿಶಿಖರಗಳ ಅಚಲತೆ, ಗಾಂಭೀರ್ಯ, ಔನ್ನತ್ಯ…
ಝರಿಗಳ ತಂಪು, ಹಸಿರಿನ ಸೊಂಪು, ಕುಸುಮಗಳ ಕಂಪುಗಳೊಡನೆ ಕಂಗೊಳಿಸುವ ಕಾನನಮಂಡಲ…
ಅಲ್ಲೊಂದು…
ಪಾವನತೆಯೇ ಪಡಿಮೂಡಿದಂತಿದ್ದ ಪರ್ಣಕುಟಿ…
ಅಲ್ಲಿ…
ಮೈಮೇಲೆ ಹುತ್ತವೇಬೆಳೆದರೂ ಅರಿವಾಗದಂತೆ ಮೈಮರೆತ ಪರಮ ತನ್ಮಯತೆಯ ಮಹಾಮುನಿ…
ಆ ಮುನಿಯ ಮಹಾಮನದಲ್ಲಿ ಮೂಡಿಬಂದಿತ್ತೊಂದು ಮಹಾಪುರುಷನ ದಿವ್ಯ ಮೂರ್ತಿ…
ತಮಸೆಯ ಪರಿಶುದ್ಧಿ..
ಗಿರಿಶಿಖರಗಳ ಅಚಲತೆ,ಉನ್ನತಿ,ಗಾಂಭೀರ್ಯ..
ಕಾನನಗಳ ಸೌಂದರ್ಯ,ಸೌಮ್ಯತೆ..
ಆಶ್ರಮದ ಪವಿತ್ರತೆ..
ಮುನಿಯತ್ಯಾಗ..
ಇವೆಲ್ಲವೂ ಮೇಳೈಸಿದ್ದವು ಆ ಮೂರ್ತಿಯಲ್ಲಿ..
ಕೋಟಿಸೂರ್ಯ ಪ್ರಕಾಶ..!!!
ಆದರೆ ಕೋಟಿ ಚಂದ್ರರ ತಂಪು..!!!!!
ಆ ಮೂರ್ತಿಯ ಮೂಲದ್ರವ್ಯ ಶಿಲೆಯಾಗಿರಲಿಲ್ಲ – ಚೈತನ್ಯದ ಸೆಲೆಯಾಗಿತ್ತು..!!
ಮರದ ಮೂರ್ತಿಯದಲ್ಲ – ಅಮರ ಮೂರ್ತಿ..!!
ಮೃಣ್ಮಯವಲ್ಲ – ಚಿನ್ಮಯಮೂರ್ತಿ..!!
ಒಂದೇ ಒಂದೂ ಕುಂದೂ ಇಲ್ಲದ ಚಂದದ ಮೂರ್ತಿ…

© 2025 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑